ಕೆಇಬಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು

ಶಿವಮೊಗ್ಗ : ಜುಲೈ ೧ರಿಂದ ವಿದ್ಯುತ್ ದರ ಏರಿಕೆ ಮಾಡುವ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸಿ ಶಿವಮೊಗ್ಗ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿದೆ. ಕೆಇಬಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿರುವ ಎನ್‌ಎಸ್‌ಯುಐ ಕಾರ್ಯಕರ್ತರು ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ದೇವೇಂದ್ರಪ್ಪ, ಆಪರೇಷನ್ ಕಮಲ ಮಾಡಿ ಶಾಸಕರನ್ನು ಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಆ ಹಣವನ್ನು ವಾಪಾಸ್ ಪಡೆಯಲು ಎಲ್ಲಾ ವಸ್ತುಗಳ ಬೆಲೆ ಏರಿಸುತ್ತಿದೆ. ಈಗಾಗಲೇ ೪ ಬಾರಿ ವಿದ್ಯುತ್ ದರ ಏರಿಕೆ ಮಾಡಲಾಗಿದ್ದು ಮತ್ತೊಮ್ಮೆ ದರ ಹೆಚ್ಚಳ ಮಾಡಲು ಹೊರಟಿದೆ. ಸರ್ಕಾರಕ್ಕೆ ಜನರ ಬಗ್ಗೆ ಕುರಣೆಯಿದ್ದರೆ ಈ ನಿರ್ಣಯವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.