ಶಿವಮೊಗ್ಗ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ರನ್ನು ಸಚಿವ ಸಂಪುಟದಿಂದ ವಜಾಗೊಳಿಸುಂತೆ ಆಗ್ರಹಿಸಿ ಶಿವಮೊಗ್ಗ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿದೆ. ರಾಜ್ಯ ಸರ್ಕಾರು ಪಠ್ಯ ಪುಸ್ತಕವನ್ನು ಕೇಸರೀಕರಣ ಗೊಳಿಸುತ್ತಿದೆ. ಅದಕ್ಕಾಗಿ ರೋಹಿತ್ ಚಕ್ರತೀರ್ಥರಂತಹ ಅನರ್ಹರನ್ನು ಪಠ್ಯ ಪುಸ್ತಕ ಪರಿಷ್ಕರಣೆಯ ಅಧ್ಯಕ್ಷರಾಗಿ ನೇಮಿಸಿದ್ದಾರೆ.
ಸರ್ಕಾರದ ಇಂಥಹ ಕ್ರಮಗಳನ್ನು ಖಂಡಿಸಿ ಎನ್‌ಎಸ್‌ಯುಐ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿತ್ತಿದ್ದ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಲಾಗಿದೆ. ಕೂಡಲೇ ಅವರನ್ನು ಸರ್ಕಾರ ಬಿಡುಗಡೆ ಮಾಡಬೇಕು ಹಾಗೂ ಶಿಕ್ಷಣ ಸಚಿವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.