ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ

ಶಿವಮೊಗ್ಗ :  ರಾಜಿ ಸಂಧಾನದ ಮೂಲಕ ಶೀಘ್ರ, ಸುಲಭ ಮತ್ತು ಶುಲ್ಕರಹಿತವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶದಿಂದಾಗಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಶಿವಮೊಗ್ಗ ಜಿಲ್ಲೆಯಾದ್ಯಂತ ನಡೆಯಿತು.

ರಾಷ್ಟ್ರೀಯ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಿತು. ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್ ಬೌನ್ಸ್, ರಾಜೀಯಾಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನನ್ವಯ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಪಾಲು, ವಿಭಜನಾ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ ಪ್ರಕರಣಗಳ ಎರಡು ಕಡೆಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯ್ತು.