ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ 

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ 

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಿವಿಧ ಇಲಾಖೆಗಳು ಹಾಗೂ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಾದ್ಯಂತ ೫ ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಿತು. ಈ ವೇಳೆ ಹಲವರು ಉಪಸ್ಥಿತರಿದ್ದರು.


ಶಾಸಕರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ 

ಸಾಗರ : ಶಾಸಕ ಹರತಾಳು ಹಾಲಪ್ಪ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಸಾಗರ ತಾಲೂಕಿನಲ್ಲಿ ೧೧೨ ಬೂತ್‌ಗಳಲ್ಲಿ ೧೩ ಸಾವಿರದ ೭೫೩ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಹಿಂದೆ ಇದ್ದ ಹಲವಾರು ಕಾಯಿಲೆಗಳನ್ನು ನಮ್ಮ ಆರೋಗ್ಯ ಕಾರ್ಯರ್ತರು ಹಾಗೂ ಆಡಳಿತಗಾರರು ದೇಶದಿಂದ ಹೋಗಲಾಡಿಸಿದ್ದಾರೆ. ಅದೇ ರೀತಿಯಾಗಿ ಪಲ್ಸ್ ಪೋಲಿಯೋ ಕೂಡ ಕೊನೆ ಹಂತದಲ್ಲಿದೆ. ಅದನ್ನು ಕೂಡ ನಾವು ಸಂಪೂರ್ಣವಾಗಿ ಎದುರಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು, ಆರೋಗ್ಯಾಧಿಕಾರಿಗಳು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.