ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ 

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ನೆಹರು ಯುವ ಕೇಂದ್ರ ಹಾಗೂ ಹಲವು ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ ನಡೆಯಿತು. ಕುವೆಂಪು ರಂಗಮಂದಿರಲ್ಲಿ ನಡೆದ ಕಾರ್ಯಕ್ರಮವನ್ನು ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಉಸ್ತುವರಿ ಸಚಿವ ಕೆ.ಸಿ.ನಾರಯಣಗೌಡ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಇಡೀ ಪ್ರಪಂಚದಲ್ಲಿ ಅನೇಕ ಗೊಂದಲಗಳಿವೆ. ಆದರೆ ಇಡೀ ಪ್ರಪಂಚಕ್ಕೆ ಮಾರ್ಗದರ್ಶನ ಮಾಡಿ, ವಿಶ್ವನಾಯಕನಾಗಿ ಜಗತ್ತಿನ ಪ್ರೀತಿಗೆ ಪಾತ್ರವಾಗಿರುವ ಒಬ್ಬೇ ಒಬ್ಬ ವ್ಯಕ್ತಿ ಅಂದ್ರೆ ಅದು ನರೇಂದ್ರ  ಮೋದಿ ಅಂದು ನಾವೆಲ್ಲ ಹೆಮ್ಮೆಯಿಂದ ಹೇಳಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಎಸ್ಪಿ ಲಕ್ಷ್ಮೀಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.