ಬೆಂಗಳೂರು : ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಹೊಸ ವರ್ಷಾಚರಣೆಗೆ ಕೆಲವು ನಿರ್ಬಂಧಗಳನ್ನು ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಡಿಜೆ ಬಳಕೆ ಮತ್ತು ಬಹಿರಂಗ ಸಂಭ್ರಮಾಚರಣೆಯನ್ನು ನಿಷೇಧಿಸುವ ತೀರ್ಮಾನ ಕೈಗೊಳ್ಳಲಾಗಿದೆ.
ಕೋವಿಡ್ ನಿಯಂತ್ರಣ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಡಿಸೆಂಬರ್ 30ರಿಂದ ಜನವರಿ 2ರವರೆಗೂ ರಾಜ್ಯಾದ್ಯಂತ ಈ ನಿಯಮ ಜಾರಿಯಲ್ಲಿರುತ್ತದೆ. ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಶೇಕಡಾ ೫೦ರಷ್ಟು ಮಂದಿಗೆ ಮಾತ್ರ ಅವಕಾಶ ಇರಲಿದೆ. ಅಲ್ಲಿನ ಸಿಬ್ಬಂದಿ ಎರಡೂ ಡೋಸ್ ಲಸಿಕೆ ಪಡೆದಿರಬೇಕು. ಕ್ರಿಸ್‌ಮಸ್‌ಗೆ ಯಾವುದೇ ನಿರ್ಬಂಧ ಇಲ್ಲ. ಚರ್ಚ್‌ಗಳಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪಾಲಿಸಿಕೊಂಡೇ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಅದು ಮುಂದುವರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.