ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ನಟ, ಹಾಗೂ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಗಂಡು ಮಗು ಜನಿಸಿದೆ.
ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಗಂಡು ಮಗುವಿನ ಆಗಮನದಿಂದ ಕುಮಾರಸ್ವಾಮಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ತಾತನಾದ ಖುಷಿಯಲ್ಲಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ತಾತನಾದೆ ಎಂದು ಹೇಳಲು ಅತೀವ ಸಂತೋಷವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲೆಂದು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ. ೨೦೨೦ರ ಏಪ್ರೀಲ್‌ನಲ್ಲಿ ನಿಖಿಲ್ ಮತ್ತು ರೇವತಿ ಕಲ್ಯಾಣ ಜರುಗಿತ್ತು.