ಬೆಂಗಳೂರು : ಮಾರ್ಚ್ ೨೮ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೂ ಹಿಜಾಬ್‌ಗೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಧಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆಯೂ ಹೈಕೋಟ್ ಆದೇಶ ಪಾಲಿಸಬೇಕು. ಈ ವಿಷಯದ ಬಗ್ಗೆ ಅನಗತ್ಯ ಗೊಂದಲಗಳನ್ನು ಸೃಷ್ಟಿಸುವುದು ಬೇಡ. ಕೋವಿಡ್ ನಂತರ ಮೊದಲ ಬಾರಿ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.