ಅಧಿಕಾರಿಗಳು ನ್ಯಾಯಾಲಯದ ಆದೇಶ ಪಾಲಿಸಬೇಕು

ಶಿವಮೊಗ್ಗ :  ಶಿವಮೊಗ್ಗ ಅರಣ್ಯ ವಲಯದಲ್ಲಿ 12700 ಒತ್ತುವರಿ ಪ್ರಕರಣಗಳಿದ್ದು 12300 ಎಕ್ರೆ ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ವಿಚಾರವಾಗಿ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಂಥಹ ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುಂತೆ ಅಧಿಕಾರಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಪಡೆ ಕಾರ್ಯಕ್ರಮಗಳ ಅನುಷ್ಟಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಅರಣ್ಯ ಇಲಾಖೆ ವತಿಯಿಂದ ಕೇವಲ ನಾಮಕಾವಸ್ತೆಗೆ ಗಿಡಗಳನ್ನು ನೆಡುವ ಕಾರ್ಯ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಸಮುದಾಯದ ಸಹಭಾಗಿತ್ವದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಶಿವಮೊಗ್ಗ ವಲಯ ಡಿಹೆಚ್‌ಒ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.