ಅಪ್ಪು ಸ್ಮರಣಾರ್ಥ ವಿಶೇಷ ಕಾರ್ಯಕ್ರಮಗಳ ಆಯೋಜನೆ 

ಶಿವಮೊಗ್ಗ : ಹೊಸನಗರ ತಾಲೂಕಿನ ಮಾದಾಪುರ ಗ್ರಾಮದ ಶನಿಪರಮೇಶ್ವರ ಯುವಕರ ಸಂಘದ ವತಿಯಿಂದ ಪುನೀತ್ ರಾಜ್ ಸ್ಮರಣಾರ್ಥವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಮಾದಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏಪ್ರಿಲ್ 11 ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ನನ್ನೊಳಗೆ ಎಂಬ ಕವನ ಸಂಕಲನವನ್ನು ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಸಕ ಹರತಾಳು ಹಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಬಿ.ಕೆ.ಸಂಗಮೇಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸಂಜೆ 9.30ಕ್ಕೆ ಸಂಗ್ಯಾಬಾಳ್ಯ ಎಂಬ ನಾಟಕ ಪ್ರದರ್ಶನ ನಡೆಯಲಿದೆ ಎಂದು ಶನಿಪರಮೇಶ್ವರ ಯುವಕರ ಸಂಘದಿಂದ ಮಾಧ್ಯಮಗೊಷ್ಠಿಯಲ್ಲಿ ಮಾಹಿತಿ ನೀಡಲಾಗಿದೆ.