ತೀರ್ಥಹಳ್ಳಿ : ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಪಂಚಾಯತ್ ಕ್ರೀಡಾ ಹಬ್ಬ ಕಾರ್ಯಕ್ರಮ ಆಯೋಜಿಸಿದ್ದಾರೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ ನೀಡಿದ್ದ ಆಶ್ವಾಸನೆಯನ್ನು ಈಡೇರಿಸಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಯ ಕ್ರೀಡಾಕೂಟಕ್ಕೆ ತೀರ್ಥಹಳ್ಳಿಯಲ್ಲಿ ಚಾಲನೆ ನೀಡಲಾಗಿದೆ. ಈ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಎಂಎಲ್‌ಸಿ ಡಿ.ಎಸ್.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಭಾಗಿಯಾಗಿದ್ದರು. ಅಂದ್ಹಾಗೆ ಇದೇ ರೀತಿ ಒಂದೊಂದು ದಿನ ಒಂದೊಂದು ತಾಲೂಕುಗಳಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.