ಶಿವಮೊಗ್ಗ : ಜಿಲ್ಲೆಯಲ್ಲಿ 100 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳುವ ಕೆಲಸ ನಡೀತಾ ಇದೆ. ಲಿಖಿತ ಪರೀಕ್ಷೆಯಲ್ಲಿ ಪಾಸಾದವರಿಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಸಲಾಗುತ್ತಿದೆ. ಮಹಿಳೆ ಮತ್ತು ಪುರುಷ ಇಬ್ಬರಿಗೂ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಸಂಜೆಯ ವರೆಗೂ ಈ ಪ್ರಕ್ರಿಯೆ ನಡೆಯಲಿದೆ.
ಈ ಕುರಿತಾಗಿ ಕನ್ನಡ ಮೀಡಿಯಂ ಜೊತೆ ಮಾತನಾಡಿದ ಶಿವಮೊಗ್ಗ ಎಸ್‌ಪಿ ಲಕ್ಷ್ಮೀಪ್ರಸಾದ್, ನವೆಂಬರ್ ತಿಂಗಳಲ್ಲಿ ನಡೆದಿದ್ದ ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ ನಡೆದಿತ್ತು. ಅದರ ದೈಹಿಕ ಪರೀಕ್ಷೆಯನ್ನ ಈಗ ನಡೆಸಲಾಗ್ತಾಯಿದೆ. 500 ಜನರಿಗೆ ದೈಹಿಕ ಪರೀಕ್ಷೆ ನಡೆಸಲಾಗುತ್ತಿದ್ದು ಇದರಲ್ಲಿ 100 ಜನರನ್ನ ಆಯ್ಕೆ ಮಾಡಿಕೊಳ್ಳಲಾಗುವುದು. ಸದ್ಯ 100 ಹುದ್ದೆಗಳನ್ನು ಭರ್ತಿ ಮಾಡಿಕೊಂಡರೆ, ಇನ್ನೂ ಮುಂದಿನ ಸಾಲಿನಲ್ಲಿ ೫೦ ಹುದ್ದೆಗಳು ಸೇರಿದಂತೆ ಇತರ ಹದ್ದೆಗಳಿಗೆ ಭರ್ತಿ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದರು.