ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಶಿವಮೊಗ್ಗ : ಬೆಳ್ಳಂ ಬೆಳಗ್ಗೆ ಶಿವಮೊಗ್ಗದ ಹೊರ ವಲಯದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಎಸ್ಪಿ ಲಕ್ಷ್ಮೀ ಪ್ರಸಾದ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. 150ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಈ ದಾಳಿ ನಡೆಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಕೆ ಸೇರಿದಂತೆ ಇತರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿ ಬಂದಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿ ಕೈದಿಗಳಿಗೆ ಭಯ ಹುಟ್ಟಿಸುವಂತೆ ಮಾಡಿದ್ದಾರೆ. ದಾಳಿಯ ವೇಳೆ ಏನೇನು ಸಿಕ್ಕಿವೆ ಅನ್ನೋದನ್ನು ಪೊಲೀಸರು ಸ್ಪಷ್ಟಪಡಿಸಿಲ್ಲ.