ಬೆಂಗಳೂರು : ರಾಜ್ಯದಲ್ಲಿ ಇನ್ನು ಎರಡು ದಿನ ಬಿಸಿಲಿನ ಧಗೆಗೆ ಮಳೆ ಬ್ರೇಕ್ ಹಾಕುವ ಸಾಧ್ಯತೆಯಿದೆ. ಹೌದು ರಾಜ್ಯಾದ್ಯಂತ ಪೂರ್ವ ಮುಂಗಾರು ಚುರುಕಾಗಿದೆ. ಮುಂದಿನ ಎರಡು ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ. ಒಟ್ಟಾರೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.