ಶಿವಮೊಗ್ಗ : ಡಿಸೆಂಬರ್ 26ರಂದು ಕಂಟ್ರಿಕ್ಲಬ್‌ನಲ್ಲಿ, ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ವಿಶೇಷ ಪದಾಧಿಕಾರಿಗಳ ಸಭೆ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಲೋಕೇಶ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಕಾರಣದಿಂದಾಗಿ ಕಳೆದು ಎರಡು ವರ್ಷಗಳಿಂದ ಕ್ರೀಡಾ ಚಟುವಟಿಕೆಗಳನ್ನ ನಡೆಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಸೋಸಿಯೇಶನ್‌ನ ಮುಂದಿನ ಕಾರ್ಯ ಚಟುವಟಿಕೆಗಳ ರೂಪುರೇಷೆಗಳನ್ನ ತಯಾರಿಸಲು ಈ ಸಭೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.