ಶಿವಮೊಗ್ಗ ದಸರಾಗೆ ಸಿದ್ಧತೆ

ಹೈಲೆಟ್ಸ್: 

ಶಿವಮೊಗ್ಗ ದಸರಾಗೆ ಕ್ಷಣಗಣನೆ ಆರಂಭ 

ಮಹಾನಗರ ಪಾಲಿಕೆಯಿಂದ ಸಕಲ ಸಿದ್ಧತೆ

ಫ್ರೀಡಂ ಪಾರ್ಕ್ನಲ್ಲಿ ಬೃಹತ್ ವೇದಿಕೆ ನಿರ್ಮಾಣ

ವಿವಿಧ ಕಾರ್ಯಕ್ರಮಗಳಿಗೆ ವೇದಿಕೆ ಸಜ್ಜು
 
ಶಿವಮೊಗ್ಗ:
  ಶಿವಮೊಗ್ಗದಲ್ಲಿ ದಸರಾಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ವರ್ಷಗಳಲ್ಲಿ ಕರೋನ ಕಾರಣದಿಂದ ಸರಳವಾಗಿ ನಡೆದಿದ್ದ ದಸರಾ ಈ ಬಾರಿ ಅದ್ದೂರಿಯಾಗಿ ನಡೆಯಲಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯಿಂದ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಸರ್ಕಾರದಿಂದ ೧ ಕೋಟಿ ಅನುದಾನ ಬಿಡುಗಡೆಯಾಗಿದೆ. ಇನ್ನು ದಸರಾದ ಬಹುತೇಕ ಪ್ರಮುಖ ಕಾರ್ಯಕ್ರಮಗಳು ನಗರದ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿದ್ದು ಅಲ್ಲಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಮುಕ್ತಾಯದ ಹಂತ ತಲುಪಿದೆ. ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ವೇದಿಕೆ ಸಜ್ಜಾಗಿದೆ. ಇನ್ನು ಇಲ್ಲಿಯೇ ಬನ್ನಿ ಮಂಟಪ ಕೂಡ ನಿರ್ಮಾಣವಾಗಲಿದೆ.