ಶಿವಮೊಗ್ಗ : ಅರಬಿಂದೋ ಕಾಲೇಜು ಹಲವು ವರ್ಷಗಳಿಂದ ಮಕ್ಕಳ ಸರ್ವಾಗೀಂಣ ಅಭಿವೃದ್ಧಿಗೆ ಶ್ರಮಿಸುತ್ತಾ ಬಂಧಿದೆ. ಇದೀಗ ನಮ್ಮ ಕಾಲೇಜು ಆಕಾಶ್ ಬೈಜು ಸಂಸ್ಥೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ತರಬೇತಿ ನೀಡಲಿದೆ ಎಂದು ಅರಬಿಂದೋ ಪಿಯು ಕಾಲೇಜಿನ ಪ್ರಾಂಶುಪಾಲ ಕೆ.ನಾಗರಾಜ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಮಾರು ೨೦ ವರ್ಷಗಳಿಂದಲೂ ನಮ್ಮ ಅಧ್ಯಾಪಕರು ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನ ಸಿದ್ಧಗೊಳಿಸುತ್ತಿದ್ದಾರೆ. ಇದೀಗ ನಮ್ಮ ಸಂಸ್ಥೆಯು ಆಕಾಶ್ ಬೈಜು ಅವರ ಸಹಭಾಗಿತ್ವದಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಿದರು.