ಶಿವಮೊಗ್ಗ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಜಿಲ್ಲಾ ವಕೀಲರ ಸಂಘ ಹಾಗೂ ವಿವಿಧ ಮಂಡಳಿಗಳು ಹಾಗೂ ಡಿವಿಎಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.
ಡಿವಿಎಸ್ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ ನೆರವೇರಿಸಿದು. ಪರಿಸರ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ಎ.ಎಸ್.ಚಂದ್ರಶೇಖರ್ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.
ಮುಖ್ಯ ಅತಿಥಿಗಳಾಗಿ, ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರುಳೀಧರ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ ಹಾಗೂ ಡಿವಿಎಸ್ ಸಮಿತಿಯ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಆಗಿಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿವಿಎಸ್ ಸಮಿತಿ ಅಧ್ಯಕ್ಷ ಕೊಳಲೆ ರುದ್ರಪ್ಪ.ಕೆ.ಎನ್ ವಹಿಸಿಕೊಂಡಿದ್ದರು