ಶಿವಮೊಗ್ಗ : ದೇಶದ ೭೫ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗದಲ್ಲಿಯೂ ಬಿಜೆಪಿ ವತಿಯಿಂದ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಜಗದೀಶ್, ಆಗಸ್ಟ್ ೧೩ ರಿಂದ ೧೫ ರವರೆಗೆ ಹರ್ ಘರ್ ಅಭಿಯಾನ ನಡೆಯುತ್ತದೆ. ಆಗಸ್ಟ್ ೧೫ ರಂದು ಗೋಪಿ ವೃತ್ತದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.
ಇದಕ್ಕೂ ಮೊದಲು, ಎಂಆರ್‌ಎಸ್ ವೃತ್ತದಿಂದ ಪೊಲೀಸ್ ಚೌಕಿ ತನಕ ಬೈಕ್ ರ್‍ಯಾಲಿ ನಡೆಯಲಿದೆ ಎಂದು ತಿಳಿಸಿದ್ರು. ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕೆ.ಈ.ಕಾಂತೇಶ್, ಜ್ಞಾನೇಶ್ವರ್, ಚನ್ನಬಸಪ್ಪ, ಸಂತೋಷ್ ಬಳ್ಳೇಕರೆ ಮತ್ತಿತರು ಉಪಸ್ಥಿತರಿದ್ರು.