ಸೊರಬ : ಇಡೀ ರಾಜ್ಯಕ್ಕೆ ಅನ್ವಯವಾಗುವಂತಹ ಯೋಜನೆಗಳನ್ನು ನಮ್ಮ ತಾಲೂಕಿನಲ್ಲಿ ಅಭಿವೃದ್ಧಿ ಮಾಡಬೇಕೆಂದು ಸೊರಬ ಶಾಸಕ ಕುಮಾರ್ ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಾಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಜೆಟ್‌ನಲ್ಲಿ ಅನುದಾನ ನೀಡ್ತಾರೆ. ಅದನ್ನು ನಾವು ಖರ್ಚು ಮಾಡುವವರು ಎಂಬ ಭಾವನೆಯನ್ನು ಬಿಡಬೇಕು. ನಾವೆಲ್ಲ ಆಡಳಿತ ಮಾಡುವವರು. ಅನುಕೂಲವಾಗುವಂತೆ ಕಾನೂನಿನ ಬದಲಾವಣೆಯನ್ನು ಅಪೇಕ್ಷೆ ಪಡುವವರು ನೀವು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸೊರಬ ತಾಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.