ಯೋಜನೆಗಳು ಕಾಗದದಲ್ಲಿಯೇ ಉಳಿಯಬಾರದು 

ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಹಲವು ರೈತ ಪರವಾದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಎಂದು ರೈತ ಮುಖಂಡ ಹೆಚ್.ಆರ್.ಬಸವರಾಜಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಜೆಟ್‌ನಲ್ಲಿ ನೀರಾವರಿ ಹಾಗೂ ಕೃಷಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಸಿಎಂ ಹಲವು ಒಳ್ಳೆಯ ಯೋಜನೆಗಳನ್ನು ಘೋಷಿಸಿದ್ದಾರೆ. ಆದ್ರೆ ಬಜೆಟ್‌ನಲ್ಲಿ ಘೋಷಣೆಯಾದ ಯೋಜನೆಗಳು ಕಾಗದದಲ್ಲಿ ಮಾತ್ರ ಉಳಿಯಬಾರದು. ಹಾಗೆ ಘೋಷಣೆಯಾದ ಎಲ್ಲಾ ಹಣ ವಿನಿಯೋಗವಾಗಬೇಕು. ಯೋಜನೆಗಳೆಲ್ಲ ಕಾರ್ಯಗತವಾಗಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದು ವಾಪಸ್ ತೆಗೆದುಕೊಂಡಿರುವ ಮೂರು ಕೃಷಿ ಕಾಯ್ದೆಗಳನ್ನು ಕರ್ನಾಟಕ ಸರ್ಕಾರವು ವಾಪಸ್ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.