ಶಿವಮೊಗ್ಗ : ಕರ್ನಾಟಕ ಧ್ವಜ ಸುಟ್ಟುಹಾಕಿರುವ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿರುವ ಎಂಇಎಸ್ ಹಾಗೂ ಶಿವಸೇನೆಯವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂಯುಕ್ತ ಜನತದಾಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಒಬ್ಬಂಟಿಯಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡ ಧ್ವಜ ಸುಟ್ಟು ಹಾಕಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿ ವಿಕೃತಿ ಮೆರೆದಿರುವ ಎಂಇಎಸ್ ಮತ್ತು ಶಿವಸೇನೆಯ ದುಷ್ಟರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ರಾಜ್ಯದಲ್ಲಿ ರಾಜ್ಯದಲ್ಲಿ ಈ ಸಂಘಟನೆಗಳನ್ನ ನಿಷೇಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.