ಸಿ.ಟಿ. ರವಿ ವಿರುದ್ಧ ಪ್ರತಿಭಟನೆ ರಜಪೂತ ಸಮಾಜದಿಂದ ಪ್ರತಿಭಟನೆ

ಹೈಲೆಟ್ಸ್:

ಸಿ.ಟಿ. ರವಿ ವಿರುದ್ಧ ಪ್ರತಿಭಟನೆ 

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ 

ರಜಪೂತ ಸಮಾಜದಿಂದ ಪ್ರತಿಭಟನೆ ನಡೆಸಿ, ಆಕ್ರೋಶ 

ಶಿವಮೊಗ್ಗ : 
ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿಕೆ ಖಂಡಿಸಿ ರಜಪೂತ ಸಮಾಜದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯ್ತು. ಸಿ.ಟಿ. ರವಿ ವಿರುದ್ಧ ಘೋಷಣೆ ಕೂಗಿ, ಭಾವಚಿತ್ರಕ್ಕೆ ಮಸಿ ಬಳೆಯುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ ಮಾಡಿದರು. ರಜಪೂತರು ಸ್ವಾತಂತ್ರ್ಯ ಹೋರಾಟ ಮಾಡಿಲ್ಲ. ಶಿವಾಜಿ ಏಕಾಂಗಿಯಾಗಿ ಹೋರಾಟ ಮಾಡಿದ್ರೆ, ರಜಪೂತರು ಸುಮ್ನೆ ಇದ್ರು ಅಂತ ಹೇಳಿಕೆ ನೀಡಿದ್ದು ಸಮಾಜಕ್ಕೆ ಅವಮಾನ ಮಾಡಿದಂತಾಗಿದೆ. ಚರಿತ್ರೆಯನ್ನು ತಿರುಚಲು ಹೊರಟಿದ್ದಾರೆ. ಕೂಡಲೇ ಸಮಾಜದ ಕ್ಷಮೆ ಕೇಳುವಂತೆ ಒತ್ತಾಯಿಸಿದರು.