ಶಿವಮೊಗ್ಗ : 60 ವರ್ಷ ವಯೋಮಾನದ ನೆಪವೊಡ್ಡಿ 19ವರ್ಷ ಸೇವೆ ಸಲ್ಲಿಸಿದ್ದ ಅಡುಗೆ ಸಿಬ್ಬಂದಿಯನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಲಾಗಿದೆ ಎಂದು ಅಕ್ಷರ ದಾಸೋಹ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ಈ ವಿಚಾರವಾಗಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವಯೋಮಾನದ ಕಾರಣ ನೀಡಿ ಕೆಲಸದಿಂದ ತೆಗೆದಿರುವ ಸಿಬ್ಬಂದಿಗಳಿಗೆ ನಿವೃತ್ತಿ ವೇತನ ನೀಡಬೇಕು. ಬಜೆಟ್‌ನಲ್ಲಿ ಬಿಸಿಯೂಟ ನೌಕರರಿಗೆ ಹೆಚ್ಚಳ ಮಾಡಿದ 1 ಸಾವಿರ ವೇತನವನ್ನು ಜನವರಿ 22ರಿಂದ ಅನ್ವಯಿಸಿ ಜಾರಿ ಮಾಡಬೇಕು. ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು.ಹೀಗೆ ಇನ್ನು ಅನೇಕ ಬೇಡಿಕೆಗಳನ್ನು ಅಕ್ಷರ ದಾಸೋಹ ನೌಕರರ ಸಂಘ ಸರ್ಕಾರದ ಮುಂದಿಟ್ಟಿದೆ.