ಶಿವಮೊಗ್ಗ : ಮೂರು ತಿಂಗಳಿನಿಂದ ವೇತನ ಪಾವತಿಯಾಗದೆ ಸಂಕಷ್ಟದಲ್ಲಿರುವ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಹಾಯಕಿಯರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಪ್ರತಿ ವರ್ಷವೂ ಮಾರ್ಚ್‌ನಿಂದ ಮೇ ತಿಂಗಳ ತನಕ ಸಮಸ್ಯೆಯಾಗುತ್ತಿತ್ತು. ಆದ್ರೆ ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಕೂಡ ಇನ್ನೂ ಗೌರವಧನ ಪಾವತಿಯಾಗಿಲ್ಲ. ಇದಕ್ಕೆ ಕಾರಣ ಕೇಳಿದರೆ ಯಾರು ಕೂಡ ಸರಿಯಾಗಿ ಸ್ಪಂದನೆ ನೀಡ್ತಾಯಿಲ್ಲ. ಹೀಗಾಗಿ ತಾವು ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಿಕೊಡಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.