ಕಾರ್ಮಿಕ ವಿರೋಧಿ ಕಾನೂನು ಖಂಡಿಸಿ ಪ್ರತಿಭಟನೆ 

ಶಿವಮೊಗ್ಗ : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಪ್ರತಿಭಟನೆ ನಡೆಸಲಾಯ್ತು

. ಪ್ರತಿಭಟನೆಯಲ್ಲಿ ಅಖಿಲ ಭಾರತ ವಿಮಾ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ನೌಕರರ ಸಂಘ. ಗ್ರಾಮ ಪಂಚಾಯತ್ ನೌಕರರ ಸಂಘ, ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು. ಬಳಿಕ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವೆಗೆ ಪ್ರತಿಭಟನಾ ರ್‍ಯಾಲಿ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ