ಸೆಪ್ಟಂಬರ್ 12 ರಂದು ಪ್ರತಿಭಟನೆ ಆಯೋಜನೆ

ಹೈಲೆಟ್ಸ್ : 

ವಿದ್ಯುತ್ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ
ಕೇಂದ್ರದ ಕ್ರಮ ಖಂಡಿಸಿ ಪ್ರತಿಭಟನೆಗೆ ಮುಂದಾದ ರಾಜ್ಯ ರೈತಸಂಘ
ಸೆಪ್ಟಂಬರ್ ೧೨ರಂದು ಪ್ರತಿಭಟನೆ ಆಯೋಜನೆ
ರಾಜ್ಯ ರೈತಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿಕೆ

ಶಿವಮೊಗ್ಗ : ಕೇಂದ್ರ ಸರ್ಕಾರದ ವಿದ್ಯುತ್ ಖಾಸಗೀಕರಣದ ನೀತಿಯನ್ನು ಖಂಡಿಸಿ ಸೆಪ್ಟಂಬರ್ ೧೨ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದ್ರು. ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಿದ್ಯುತ್ ಖಾಸಗೀ ಕಾರಣಕ್ಕೆ ಪ್ರಸ್ತಾವನೆ ಮಂಡನೆಯಾಗಿದ್ದು, ಈ ಪ್ರಸ್ತಾವನೆ ಅಂಗೀಕಾರವಾಗುವ ಸಾಧ್ಯತೆಯಿದೆ. ಹೀಗೇನಾದರು ಆದ್ರೆ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಆರ್ಥಿಕವಾಗಿ ಪೆಟ್ಟು ಬೀಳಲಿದೆ ಆತಂಕ ವ್ಯಕ್ತಪಡಿಸಿದ್ರು. ವಿದ್ಯುತ್ ಖಾಸಗೀಕರಣದಿಂದ ರೈತಿರಿಗೆ ಕೃಷಿ ವೆಚ್ಚ ಹೆಚ್ಚಾಗಲಿದೆ. ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗಲಿದೆ. ಆದ್ದರಿಂದ ರೈತರು ಹಾಗೂ ಜನ ಸಾಮಾನ್ಯರಿಗೆ ಹೊರೆಯಾಗುವಂತಹ ಕ್ರಮವನ್ನು ಸರ್ಕಾರ ಕೈ ಬಿಡಬೇಕು ಎಂದು ಆಗ್ರಹಿಸಿದ್ರು.