ಹೈಲೆಟ್ಸ್ :
ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ
ಸ್ಮಾರ್ಟ್‌ಸಿಟಿ ಕಾಮಗಾರಿ ವಿರುದ್ಧ ಮುಂದುವರೆದ ಪ್ರತಿಭಟನೆ
ಸ್ವಾಮಿ ವಿವೇಕಾನಂದ ಬಡಾವಣೆ ಕ್ರಿಕೆಟ್ ಕ್ರೀಡಾಂಗಣ ಅವೈಜ್ಞಾನಿಕ
ತಜ್ಞರ ಸಲಹೆಯಿಲ್ಲದೆ ಕ್ರೀಡಾಂಗಣ ನಿರ್ಮಾಣ
ಶಿವಮೊಗ್ಗ : ಸ್ಮಾರ್ಟ್‌ಸಿಟಿ ಯೋಜನೆಯ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿ ವಿರುದ್ಧ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ನಡೆಸುತ್ತಿರುವ ಸರಣಿ ಪ್ರತಿಭಟನೆ ಮುಂದುವರೆದಿದೆ. ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಸ್ಮಾರ್ಟ್‌ಸಿಟಿಯವರು ಅವೈಜ್ಞಾನಿಕ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು.
೧೭೦ ಅಡಿ ಇರಬೇಕಾದ ಕ್ರೀಡಾಂಗಣದ ಉದ್ದ ಕೇವಲ ೧೧೦ ಅಡಿಯಿದೆ. ಲೈಟಿಂಗ್ ವ್ಯವಸ್ಥೆ ಅವೈಜ್ಞಾನಿಕವಾಗಿದೆ. ತುರ್ತು ಸಂದರ್ಭದಲ್ಲಿ ಜನರೇಟರ್ ವ್ಯವಸ್ಥೆಯಿಲ್ಲ. ಸಿಮೆಂಟ್ ಕಾಮಗಾರಿ ಕಳಪೆಯಾಗಿದೆ. ೫೦ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಕ್ರೀಡಾಂಗಣಕ್ಕೆ ತಜ್ಞರ ಸಲಹೆ ಪಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಹಾಗೇನೆ ಕಾಮಗಾರಿಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ರು.