ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ : ಮಧು ಬಂಗಾರಪ್ಪ 

ಶಿವಮೊಗ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಭಾರತಕ್ಕೆ ವಾಪಾಸಾಗಿರುವ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಮಾಜಿ ಶಾಸಕ ಮಧು ಬಂಗಾರಪ್ಪ ಒತ್ತಾಯಿಸಿದರು.

ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಉಕ್ರೇನ್‌ಗೆ ಸಾಕಷ್ಟು ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆದುಕೊಳ್ಳಲು ಹೋಗುತ್ತಾರೆ. ಆದ್ರೆ ಯುದ್ಧದಿಂದಾಗಿ ಎಲ್ಲರು ಭಾರತಕ್ಕೆ ವಾಪಾಸಾಗಿದ್ದು ಶಿಕ್ಷಣ ವಂಚಿತರಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವು ಕೆಲವೊಂದಿಷ್ಟು ನಿಭಂದನೆಗಳನ್ನು ವಿಧಿಸಿಯಾದರೂ ಅವರ ಶಿಕ್ಷಣಕ್ಕೆ ಸಹಾಯ ಮಾಡಬೇಕೆಂದು ಒತ್ತಾಯಿಸಿದರು.