ರೇಲ್ವೆ ಅಂಡರ್ ಪಾಸ್ ಅಭಿವೃದ್ಧಿಗೆ ಗುದ್ದಲಿ ಪೂಜೆ 

ಶಿವಮೊಗ್ಗ : ವಿನೋಬನಗರದ ಸೋಮಿನಕೊಪ್ಪ ರಸ್ತೆಯ ರೈಲ್ವೆ ಅಂಡರ್ ಪಾಸ್ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಗುದ್ದಲಿ ಪೂಜೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಪಾಲಿಕೆ ಮೇಯರ್ ಸುನೀತ ಅಣ್ಣಪ್ಪ, ಪಾಲಿಕೆ ಆಡಳಿತ ಪಕ್ಷದ ನಾಯಕ ಚೆನ್ನಬಸಪ್ಪ,  ಪಾಲಿಕೆ ಸದಸ್ಯರಾದ ಹೆಚ್.ಸಿ.ಯೋಗೀಶ್, ಧೀರರಾಜ್ ಹೊನ್ನವಿಲೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಅಂದ್ಹಾಗೆ ರೈಲು ಬಂದಾಗ ಉಂಟಾಗುತ್ತಿದ್ದ ವಾಹನ ದಟ್ಟಣೆ ತಡೆಯುವ ಉದ್ದೇಶದಿಂದ ರೈಲ್ವೆ ಅಂಡರ್ ಪಾಸ್ ನಿರ್ಮಾಣವಾಗಲಿದೆ. ಈ ಮೂಲಕ ವಾಹನ ಸಂಚಾರ ಸುಗಮವಾಗಲಿದೆ.