ತಡೆಗೋಡೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಸ್‌ಈ

ಶಿವಮೊಗ್ಗ : ಹರಕೆರ ದೇವಾಲಯದ ಸಮೀಪ ತುಂಗಾ ನದಿಗೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸಚಿವ ಕೆ.ಎಸ್.ಈಶ್ವರ ಗುದ್ದಲಿ ಪೂಜೆ ಮಾಡಿ ಚಾಲನೆ ನೀಡಿದರು. ಇದಕ್ಕು ಮುನ್ನ ಗೋಡೆ ನಿರ್ಮಾಣವಾಗುವ ಜಾಗವನ್ನ ಸಚಿವರು ಮತ್ತೊಮ್ಮೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್‌ಗನ್ನಿ, ಸೂಡಾ ಅಧ್ಯಕ್ಷ ನಾಗರಾಜ್ ಸೇರಿದಂತೆ ಹಲವು ಮುಖಂಡರು ಸಚಿವರಿಗೆ ಸಾಥ್ ನೀಡಿದರು.