ಹೊನ್ನಾಳಿ : ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಂಡು ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೊನ್ನಾಳಿಯಲ್ಲಿನ ರೇಣುಕಾಚಾರ್ಯ ನಿವಾಸಕ್ಕೆ ಆಗಮಿಸಿದ್ದರು.
ಈ ವೇಳೆ ಶಾಸಕ ರೇಣುಕಾಚಾರ್ಯ ಅವರು ಯಡಿಯೂರಪ್ಪನವರ ಮತ್ತೊಂದು ಬಾರಿ ಚುನಾವಣೆಗೆ ಸ್ಪರ್ಧಿಸಲು ಮನವಿ ಮಾಡಿ ಭಾವುಕರಾದರು. ಈ ವೇಳೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಕಾಂಗ್ರೆಸ್ ಪ್ರತಿಪಕ್ಷದಲ್ಲಿ ಕೂರಬೇಕು. ಅದಕ್ಕಾಗಿ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಎಲ್ಲಾ ವರ್ಗದ ಜನರು ಯಡಿಯೂರಪ್ಪನವರಿಗೆ ಬೆಂಬಲ ನೀಡಿದ್ದಾರೆ. ಬಿಎಸ್‌ವೈ ಇನ್ನೊಂದು ಬಾರಿ ಶಾಸಕರಾಗಬೇಕೆಂಬುದು ಎಲ್ಲಾ ಶಾಸಕರ ಇಂಗಿತ ಎಂದರು.