ಶಿವಮೊಗ್ಗ : ಬೈಪಾಸ್ ರಸ್ತೆ ಪಕ್ಕದ ಅಲೆಮಾರಿ ಕ್ಯಾಂಪ್‌ಅನ್ನು ಕೊಳಚೆ ಪ್ರದೇಶವೆಂದು ಘೋಷಿಸುವಂತೆ ನಿರಂತರ ಸಂಘಟನೆ ಹಾಗೂ ಅಲೆಮಾರಿ ಕ್ಯಾಂಪ್‌ನಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
40 ವರ್ಷಗಳಿಂದ ಇಲ್ಲಿಯೇ ಹೊಟ್ಟೆಪಾಡಿಗಾಗಿ ಭಿಕ್ಷೆ ಬೇಡುವುದು, ಗುಜುರಿ ಆಯುವುದು ಹಾಗೂ ಸಣ್ಣ ಪುಟ್ಟ ಬೀದಿ ವ್ಯಾಪಾರಗಳನ್ನು ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಯಾವುದೇ ಮೂಲ ಸೌಕರ್ಯವಿಲ್ಲದೆ ಅನಾರೋಗ್ಯಕರ ವಾತಾವರಣದಲ್ಲಿ ವಾಸಿಸುತ್ತಿದ್ದೇವೆ. ಆದ್ದರಿಂದ ಈ ಪ್ರದೇಶವನ್ನು ಅಧೀಕೃತವಾಗಿ ಕೊಳಚೆ ಪ್ರದೇಶವೆಂದು ಘೋಷಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ಇದರ ಜೊತೆಗೆ ಒಂದು ಶಾಶ್ವತ ಸೂರಿನ ಭದ್ರತೆಯ ಅವಶ್ಯಕತೆಯಿದೆ ಹಾಗೂ ಈ ಜಾಗದಲ್ಲಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಲು ಮುಂದಾಗಿದೆ. ಹೀಗಾಗಿ ನಮಗೆ ಯಾವುದೇ ತೊಂದರೆಯಾಗದಂತೆ ಈ ಕಾಮಗಾರಿ ನಡೆಸಲು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಸಲ್ಲಿಸಲಾಗಿದೆ.