ಹೈಲೆಟ್ಸ್:
ನಗರದ ಕೆಲವು ರಸ್ತೆಗಳಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ
ಬೆಳಗ್ಗೆ ೮ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ನಿಷೇಧ
ಸಾರ್ವಜನಿಕರ ತೊಂದರೆಯಾಗದಂತೆ ಮುಂಜಾಗ್ರತ ಕ್ರಮ
ಎಸ್ಪಿ ಮಿಥುನ್‌ಕುಮಾರ್ ಮಾಹಿತಿ
ಶಿವಮೊಗ್ಗ:
ನಗರದ ಕೆಲವು ರಸ್ತೆಗಳಲ್ಲಿ ಭಾರಿ ವಾಹನಗಳಿಗೆ ಬೆಳಗ್ಗೆ ೮ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ನಿರ್ಬಂಧಿಸಿಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ನಗರದ ಕೆಲವು ರಸ್ತಗಳಲ್ಲಿ ಭಾರಿ ವಾಹನಗಳನ್ನು ನಿರ್ಬಂಧಿಸಿ ಡಿಸಿ ಅದೇಶ ಹೊರಡಿಸಿದ್ದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಪಿ ಮಿಥುನ್‌ಕುಮಾರ್, ಬೆಳಗ್ಗೆ ೮ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ನಿರ್ಬಂಧ ಹೇರಲಾಗಿರುವ ರಸ್ತೆಗಳಲ್ಲಿ ವಾಹನ ಚಲಾಯಿಸುವಂತಿಲ್ಲ. ಈ ಸಮಯದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಓಡಾಡುವುದರಿಂದ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತ ಕ್ರಮವಾಗಿ ಭಾರಿ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ಮಾಹಿತಿ ನೀಡಿದರು.