ಶಿವಮೊಗ್ಗ : ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದು ಹೇಳಿಕೆ ನೀಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಕೆ.ಎಸ್.ಈಶ್ವರಪ್ಪಗೆ ಮುತ್ತಿಗೆ ಯತ್ನ ನಡೆಸಿದರು.
ಈ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟಗಳು ನಡೆದಿವೆ. ಕಾರ್ಯಕರ್ತರು ತಮ್ಮ ತಮ್ಮ ಪಕ್ಷದ ಪರ ಘೋಷಣೆಗಳನ್ನು ಕೂಗಿದರು ಹಾಗೂ ಅವಾಚ್ಯ ಶಬ್ಧಗಳಿಂದ ಒಬ್ಬರನ್ನು ಒಬ್ಬರು ನಿಂದಿಸಿಕೊಂಡಿದ್ದಾರೆ. ಇದರಿಂದಾಗಿ ಬಿಜೆಪಿ ಕಚೇರಿ ಆವರಣದಲ್ಲಿ ಕೆಲ ಕಾಲ ಉದ್ವಿಘ್ನ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಅಲ್ಲಿಂದ ವಾಪಾಸ್ ಕರೆದುಕೊಂಡು ಹೋದ ಪೊಲೀಸರು ವಾತಾವರಣ ತಿಳಿಗೊಳಿಸಿದರು.