ದೆಹಲಿ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತೀನ್ ಗಡ್ಕರಿ ಅವರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಗಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ ಭೇಟಿಯಾಗಿದ್ದಾರೆ.
ಕರ್ನಾಟಕ ಎಲೆಕ್ಟ್ರಿಕಲ್ ವೆಹಿಕಲ್ ಮ್ಯಾನುಫ್ಯಾಕ್ಚರರ್ಸ್ ಅಂಡ್ ಡೀಲರ್ಸ್ ಅಸೋಸಿಯೇಷನ್‌ನ ತಂಡದೊಂದಿಗೆ ಕೇಂದ್ರ ಸಚಿವರ ದೆಹಲಿಯ ಸ್ವಗೃಹದಲ್ಲಿ ಭೇಟಿ ಮಾಡಿ, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿರುವಂತಹ ಅನೇಕ ಸಮಸ್ಯೆಗಳ ಬಗ್ಗೆ ಹಾಗೂ ಸರ್ಕಾರದ ವತಿಯಿಂದ ನೀಡಬಹುದಾದ ಇನ್ನಷ್ಟು ರಿಯಾಯಿತಿಗಳ ಬಗ್ಗೆ ಚರ್ಚಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಎಲೆಕ್ಟ್ರಿಕಲ್ ವೆಹಿಕಲ್ ಮ್ಯಾನುಫ್ಯಾಕ್ಚರರ್ಸ್ ಅಂಡ್ ಡೀಲರ್ಸ್ ಅಸೋಸಿಯೇಷನ್ ನ ಕಾರ್ಯದರ್ಶಿ ಹಾಗೂ ನರೇಂದ್ರ ಮೋದಿ ವಿಚಾರ ಮಂಚ್‌ನ ರಾಜ್ಯಾಧ್ಯಕ್ಷ ಕೆ.ಆರ್.ವೆಂಕಟೇಶ್, ಇ- ಅಶ್ವ ಆಟೋಮೋಟಿವ್ ಪ್ರೈವೇಟ್ ಲಿಮಿಟೆಡ್‌ನ ಮಾಲೀಕರಾದ ಶ್ರೀ ವಿಕಾಸ್ ಗುಪ್ತ, ಸುಭಾಷ್ ಆಟೋಮೋಟಿವ್ ಪ್ರೈವೇಟ್ ಲಿಮಿಟೆಡ್‌ನ ಮಾಲೀಕರಾದ ನಾಗೇಶ್, ರಾಜೀವ್ ತಿವಾರಿ ಮತ್ತಿತರರು ಉಪಸ್ಥಿತರಿದ್ದರು.