ಶಿವಮೊಗ್ಗ : ಇಲ್ಲಿನ ಬೆಕ್ಕಿನಕಲ್ಮಠದಲ್ಲಿ ಶ್ರೀ ಗುರುಬಸವ ಮಹಾಸ್ವಾಮಿಗಳ ೧೧೦ನೇ ಪುಣ್ಯ ಸ್ಮರಣೋತ್ಸವ ಹಾಗೂ ಶರಣ ಸಾಹಿತ್ಯ ಸಮ್ಮೇಳನ ಮತ್ತು ಭಾವೈಕ್ಯ ಸಮ್ಮೇಳನ ಆಯೋಜನೆ ಮಾಡಲಾಗಿದೆ.
ಸ್ಮರೋಣೋತ್ಸವ ಸಮಿತಿ ವತಿಯಂದ ಮಾರ್ಚ್ ೫ರಂದು ಬೆಕ್ಕಿನಕಲ್ಮಠದ ಗುರುಬಸವ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದರು. ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗುರುಬಸವ ಶ್ರೀ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದರು.