ಗೃಹ ಸಚಿವರಿಂದ ಭದ್ರತಾ ವ್ಯವಸ್ಥೆ ಪರಿಶೀಲನೆ 

ಬೆಂಗಳೂರು : ಏಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು ಅರಮನೆಯಲ್ಲಿ ಹಮ್ಮಿಕೊಂಡಿರುವ ಸಾರ್ವಜನಿಕ ಸಮಾರಂಭದಲ್ಲಿ ಅವರು ಭಾಗಿಯಾಗಲಿದ್ದಾರೆ.

ಈ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪೂರ್ವ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ವೇಳೆ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್, ನಗರ ಪೊಲೀಸ್ ಮುಖ್ಯಸ್ಥ ಕಮಲ್ ಪಂತ್ ಹಾಗೂ ಇತರ ಹಿರಿಯ ಪೋಲೀಸ್ ಅಧಿಕಾರಿಗಳು ಹಾಜರಿದ್ದರು. ಅಂದ್ಹಾಗೆ ಏಪ್ರಿಲ್ ತಿಂಗಳಿನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಿಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.