ಸೆಪ್ಟಂಬರ್ 17ಕ್ಕೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ : ಜಿಲ್ಲೆಯಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳಿಗೆ ತಯಾರಿ

ಹೈಲೆಟ್ಸ್ : 

ಸೆಪ್ಟಂಬರ್ 17ಕ್ಕೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ
15 ದಿನಗಳ ಸೇವಾ ಪಾಕ್ಷಿಕ ಕಾರ್ಯಕ್ರಮ ಆಯೋಜನೆ
ಜಿಲ್ಲೆಯಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳಿಗೆ ತಯಾರಿ
ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿವರ ಹುಟ್ಟುಹಬ್ಬವನ್ನು ಸೆಪ್ಟಂಬರ್ ೧೭ರಿಂದ ೧೫ ದಿನಗಳ ಕಾಲ ಸೇವಾ ಪಾಕ್ಷಿಕವಾಗಿ ಆಚರಿಸಲಾಗುವುದು. ಈ ವೇಳೆ ಜಿಲ್ಲೆಯಲ್ಲಿಯೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಜನರಿಗೆ ನೀಡಿದ ಸೇವೆಯನ್ನು ಪ್ರತಿಯೊಬ್ಬರಿಗೆ ಮುಟ್ಟಿಸುವ ಕಾರ್ಯ ಮಾಡಲಾಗುವುದು. ಈ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳ ಮಾಹಿತಿಯುಳ್ಳ ಪುಸ್ತಕವನ್ನು ಮನೆ ಮನೆಗೆ ತೆರಳಿ ನೀಡಲಾಗುವುದು ಎಂದರು.

ಹಾಗೇನೆ ಇದರೊಟ್ಟಿಗೆ ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಸಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡಿರುವುದಾಗಿ ಮಾಹಿತಿ ನೀಡಿದರು.