ವಿಧಾನಸಭಾ ಅಧಿವೇಶನದಲ್ಲಿ ಮುಂದುವರಿದ ಗದ್ದಲ : ಸೋಮವಾರಕ್ಕೆ ಸದನ ಮುಂದೂಡಿಕೆ

ಬೆಂಗಳೂರು : ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕರ ಹೋರಾಟ ಶುಕ್ರವಾರವೂ ಮುಂದುವರಿಯಿತು. ಅಧಿವೇಶನ ಆರಂಭವಾಗುತ್ತಿದ್ದಂತೆ ಸದನದ ಬಾವಿಗೆ ಇಳಿದು ಸಚಿವ ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಶಾಸಕರು ಘೋಷಣೆ ಕೂಗಿ, ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಸ್ಪೀಕರ್ ಕಾಗೇರಿ ಅವರು ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಸಿಎಂ ಬಸವರಾಜ ಬೊಮ್ಮಾಯಿ ಮಾತಾಡಿ, ರಾಜ್ಯದಲ್ಲಿ ಗಂಭೀರ ಸಮಸ್ಯೆಗಳು ಇವೆ. ಅವುಗಳ ಬಗ್ಗೆ ಚರ್ಚೆ ಮಾಡಬೇಕು. ಶಾಲಾ - ಕಾಲೇಜುಗಳಲ್ಲಿ ಹಿಜಾಬ್ ವಿವಾದ ಇದೆ. ಹೈಕೋರ್ಟ್‌ನಲ್ಲಿ ಪ್ರಕರಣ ನಡೀತಾ ಇದೆ. ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗ್ತಾ ಇಲ್ಲ. ಅಂತಹ ವಿಷ್ಯಗಳ ಕುರಿತು ಚರ್ಚೆ ನಡೆಸಿ, ನಿರ್ಣಯ ಕೈಗೊಳ್ಳಬೇಕಾದ ನಾವು ಹೀಗೆ ಸದನದ ಕಾಲ ಹರಣ ಮಾಡಿದ್ರೆ ಹೇಗೆ ಎಂದು ಪ್ರಶ್ನೆ ಮಾಡಿದ್ರು.