ಹೈಲೆಟ್ಸ್ :
ಮಧು ಬಂಗಾರಪ್ಪಗೆ ಶಿವಮೊಗ್ಗ ಕಾಂಗ್ರೆಸ್ ಅಭಿನಂದನೆ
ಎಂಆರ್‌ಎಸ್ ವೃತ್ತದಿಂದ ಬೈಕ್ ರ್‍ಯಾಲಿ ಮೂಲಕ ಸ್ವಾಗತ
ಬೃಹತ್ ಗಾತ್ರದ ಸೇಬು ಹಣ್ಣಿನ ಹಾರ ಹಾಕಿ ಅಭಿನಂದನೆ
ಶಿವಮೊಗ್ಗ : ಕೆಪಿಸಿಸಿ ಒಬಿಸಿ ಘಟಕದ ರಾಜ್ಯ ಅಧಕ್ಷರಾಗಿ ಆಯ್ಕೆಯಾಗಿರುವ ಮಧು ಬಂಗಾರಪ್ಪಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅದ್ದೂರಿಯಾಗಿ ಅಭಿನಂದನೆ ಸಲ್ಲಿಸಿದೆ. ಎಂಆರ್‌ಸ್ ವೃತ್ತದಿಂದ ಬೈಕ್ ರ್‍ಯಾಲಿ ನಡೆಸುವ ಮೂಲಕ ಮಧು ಬಂಗಾರಪ್ಪ ಅವರಿಗೆ ಸ್ವಾಗತ ಕೋರಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ರ್‍ಯಾಲಿ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಅಂತ್ಯವಾಯಿತು. ಈ ನಡುವೆ ಬೆಕ್ಕಿನಕಲ್ಮಠ ಬಳಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಬೃಹತ್ ಗಾತ್ರದ ಸೇಬು ಹಣ್ಣಿನ ಹಾರವನ್ನು ಹಾಕಿದರು. ಬಳಿಕ ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅಧ್ಯಕ್ಷತೆಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪಗೆ ಅಭಿನಂದನೆ ಸಲ್ಲಿಸಲಾಯಿತು.