ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ದೆಹಲಿ ಭೇಟಿ 

ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ಇನ್ನೂ ಒಂದೂವರೆ ವರ್ಷದಲ್ಲಿ ಚುನಾವಣೆ ಎದುರಾಗಲಿದೆ. ಈ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಏರಲೇಬೇಕು ಎಂಬ ಮಹತ್ವಾಕಾಂಕ್ಷೆಯನ್ನು ಕಾಂಗ್ರೆಸ್ ಹೊಂದಿದೆ.

ಈ ನಡುವೆ ಕಾಂಗ್ರೆಸ್ ಹಂಗಾಮಿ ರಾಷ್ಟಾçಧ್ಯಕ್ಷೆ ಸೋನಿಯಾ ಗಾಂಧಿ ಬುಲಾವ್ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಹಲವು ಊಹಾಪೋಗಳಿಗೆ ಕಾರಣವಾಗಿದೆ. ಆದ್ರೆ ಕಳೆದ ೧೨ ವರ್ಷಗಳಿಂದ ಕೆಪಿಸಿಸಿಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಹಾಗಾಗಿ ಜಿಲ್ಲಾ ಕಾಂಗ್ರೆಸ್, ಯುವ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಸೇರಿದಂತೆ ಹಲವು ಸಮಿತಿಗಳ ಪದಾಧಿಕಾರಿಗಳನ್ನು ಬದಲಾಯಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಟ್ಟಿಗೆ ಅಂತಿಮ ರೂಪುರೇಷೆ ನೀಡಲಾಗಿದೆ. ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಒಪ್ಪಿಗೆ ಪಡೆದು ಅಂತಿಮಗೊಳಿಸಲು ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ. ಈ ಮೂಲಕ ಪಕ್ಷ ಸಂಘಟನೆಗೆ ಮತ್ತಷ್ಟು ಬಲ ತುಂಬಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎಂದು ತಿಳಿದು ಬಂದಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಸಣಜೆ ವೇಳೆಗೆ ಸಿದ್ದರಾಮಯ್ಯ ಭೇಟಿಯಾದರು. ಈ ಸಂದರ್ಭದಲ್ಲಿ ಒಂದೂವರೆ ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದರು. ಆ ಬಳಿಕ ಹೊರಬಂದ ಸಿದ್ದರಾಮಯ್ಯ, ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕಾರಿನಲ್ಲಿ ತೆರಳಿದರು.