ಹೈಲೆಟ್ಸ್:
ಶಿವಮೊಗ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ
ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ರಾಜ್ಯದ ಖಜಾನೆ ಲೂಟಿ ಮಾಡಿರೋರು ಕಾಂಗ್ರೆಸ್‌ನವರು
ಶಿವಮೊಗ್ಗ: ಮೂರು ತಲೆಮಾರಿಗೆ ಆಗುವಷ್ಟು ಹಣ ಮಾಡಿಕೊಂಡಿದ್ದೇವೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಖಜಾನೆ ಲೂಟಿ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಿರೋದು ಇದರಿಂದ ಗೊತ್ತಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಅವರು ಸಿದ್ದರಾಮಯ್ಯರ ಅಧಿಕಾರ ಅವಧಿಯಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಅವು ಬೆಳಕಿಗೆ ಬರ್ತಾ ಇವೆ ಎಂದ ಅವರು, ಬಿಜೆಪಿ ಸರಕಾರಗಳು ಉತ್ತಮ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ. ಕೇಂದ್ರ ಸರಕಾರ ಪಿಎಫ್‌ಐನ ನಿಷೇಧ ಮಾಡಿದೆ, ಇದೀಗ ದಾಳಿಗಳು ನಡೀತಾ ಇವೆ ಎಂದು ಅವರು ಹೇಳಿದ್ರು. ಮುಖ್ಯಮಂತ್ರಿಗಳ ಬಗ್ಗೆ ಟೀಕೆ ಮಾಡಿ, ಪೋಸ್ಟರ್ ಹಚ್ಚುವ ಕೆಲಸ ಮಾಡಿರೋದು ವಿಪಕ್ಷ ನಾಯಕರಿಗೆ ಶೋಭೆ ತರೋದಿಲ್ಲ ಎಂದು ಅವರು ಹೇಳಿದ್ರು.