ಸೊರಬ : ಇಲ್ಲಿನ ರೈತರಿಗೆ ಅನುಕೂಲವಾಗುವ ಹಾಗೆ ದಂಡಾವತಿ ನದಿಯ ಎಡ ಹಾಗೂ ಬಲ ಭಾಗದಲ್ಲಿ ಚಾನಲ್ ನಿರ್ಮಿಸುವ ಯೋಜನೆಯನ್ನು 460 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಸೊರಬ ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.
ಸೊರಬ ಬಿಜೆಪಿ ಕಚೇರಿಯಲ್ಲಿ ನಡೆದ ತಾಲೂಕು ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಸೊರಬ ಕ್ಷೇತ್ರದ ಸಮಗ್ರ ನೀರಾವರಿ ಯೋಜನೆಗಳ ಕುರಿತು ಪ್ರಸ್ತಾಪಿಸಿದರು. ಸಭೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಾಥ, ಸಹ ಪ್ರಭಾರಿ ಶರಾವತಿ.ಸಿ.ರಾವ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಡಸೂರು ಸೇರಿದಂತೆ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.