ಬಿಸಿಯೂಟ ಯೋಜನೆಗೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು 

ತುಮಕೂರು : ಮಧ್ಯಾಹ್ಯದ ಬಿಸಿ ಊಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗುತ್ತದೆ. ಅವರು ಕಷ್ಟದಲ್ಲಿರುವವರಿಗೆ ಬದುಕು ಕಟ್ಟಿಕೊಡುತ್ತಿದ್ದರು. ಮಧ್ಯಾಹ್ನದ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿಗಳ ಹೆಸರನ್ನ ಇಡಲಾಗುವುದು. ಈ ಬಗ್ಗೆ ಆದೇಶ ಹೊರಡಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತುಮಕೂರಿನಲ್ಲಿ ನಡೆಯುತ್ತಿರುವ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನಡೆದಾಡಿದ ನೆಲದಲ್ಲಿ ಸ್ಪೂರ್ತಿ, ಹೆಮ್ಮೆ ಇದೆ. ಸುಮಾರು ೮೮ ವರ್ಷ ಈ ಮಠದ ಸೇವೆ ಮಾಡಿದ್ದಾರೆ. ಇದು ದಾಖಲೆ. ಇಡಿ ದೇಶದಲ್ಲೇ ಈ ಕೆಲಸ ಯಾರು ಮಾಡಿಲ್ಲ. ಆ ದಾಖಲೆ ನಮ್ಮ ಶಿವಕುಮಾರ ಸ್ವಾಮಿಗಳು ಮಾಡಿದ್ದಾರೆ. ಶ್ರೀಗಳು ಹಚ್ಚಿದ ಒಲೆಯ ಕಿಚ್ಚು ನಿರಂತರವಾಗಿ ನಡೆಯುತ್ತಿವೆ. ಅವರು ನಮ್ಮ ನಡುವೆ ಜೀವಂತವಾಗಿದ್ದಾರೆ. ಅವರು ದೈಹಿಕವಾಗಿ ಇಲ್ಲದೆ ಇದ್ದರೂ ಅವರ ನಡೆ ಗೌರವ ನಮ್ಮ ಜೊತೆ ಸದಾ ಇರುತ್ತದೆ ಎಂದರು.