ಶಿವಮೊಗ್ಗ : ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ಸಂಸ್ಥೆ ವತಿಯಿಂದ ವಿಶ್ವಮಾನವ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ಆಯೋಜಿಸಲಾಗಿದೆ.
ಈ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ಸಂಸ್ಥೆಯ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್, ಡಿಸೆಂಬರ್ ೨೯ರ ಬುಧವಾರದಂದು ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಸಂಸ್ಥೆ ಆಶ್ರಯದಲ್ಲಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆ ಹಾಗೂ ನರಸಿಂಹಯ್ಯನವರ ಜನ್ಮ ಶತಮಾನೋತ್ಸವ ಹಾಗೂ ರಾಜ್ಯಮಟ್ಟದ ಪ್ರಥಮ ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನ ನಡೆಯಲಿದೆ ಹಾಗೂ ರಾಜ್ಯಮಟ್ಟದ ಹೆಚ್.ಎನ್. ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಸಾಧಕರಿಗೆ ಸನ್ಮಾನ ಮಾಡಲಾಗುವುದು. ಜೊತೆಗೆ ರಾಜ್ಯಮಟ್ಟದ ಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.