ಶಿವಮೊಗ್ಗ : ಜುಲೈ ೧೭ ರಂದು ಬಂಜಾರ ಜನಸೇವಾ ಸಂಘದಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ವಧು-ವರರ ಅನ್ವೇಷಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಂಜಾರ ಜಿಲ್ಲಾ ಸಮಿತಿ ಕರೆ ನೀಡಿದೆ.
ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತಾಡಿದ ಜಿಲ್ಲಾಧ್ಯಕ್ಷ ವಿನಯ್, ಹೆಚ್ಚಿನ ಸಂಖ್ಯೆಯಲ್ಲಿ ಬಂಜಾರ ಸಮುದಾಯದವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೇಳಿಕೊಂಡರು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.