ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಕಾರ್ಯಾಗಾರ 

ಶಿವಮೊಗ್ಗ : ಪ್ರೆಸ್‌ಟ್ರಸ್ಟ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಎಂಬ ಕಾರ್ಯಾಗಾರ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಕ್ಷಯರೋಗ ವಿಭಾಗ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಾಗಾರ ಆಯೋಜನೆ ಮಾಡಲಾಗಿತ್ತು. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ಷಯ ರೋಗದ ಕುರಿತಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.