ಕೋರ್ಟ್ ಆದೇಶಕ್ಕೆ ಬೆಲೆ ಕೊಡಿ 

ಸಾಗರ : ಕೋರ್ಟ್ ಆದೇಶದಂತೆ ಎಲ್ಲರೂ ನಡೆದುಕೊಳ್ಳೋಣ. ಹಿಜಾಬ್ ತೆಗೆದಿಟ್ಟು ಎಲ್ಲರೂ ಪರೀಕ್ಷೆಗೆ ಹಾಜರಾಗಿ ಎಂದು ಶಾಸಕ ಹರತಾಳು ಹಾಲಪ್ಪ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು ರಾಜ್ಯಾದ್ಯಂತ ಎಸ್‌ಎಸ್‌ಎಲ್ ಪರೀಕ್ಷೆ ಆರಂಭವಾಗಿದೆ. ಪರೀಕ್ಷೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಎಸ್‌ಎಲ್‌ಎಲ್‌ಸಿ ಪರೀಕ್ಷೆ ಬದುಕಿನಲ್ಲಿ ಮಹತ್ವದ ಘಟ್ಟ. ಆದ್ದರಿಂದ ಕೋರ್ಟ್ ಆದೇಶಕ್ಕೆ ಬೆಲೆ ಕೊಟ್ಟು, ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯಿರಿ. ಮುಸ್ಲೀಂ ಸಮುದಾಯದ ಹಿರಿಯರು ತಮ್ಮ ಮಕ್ಕಳನ್ನು ಪರೀಕ್ಷೆ ಬರೆಯಲು ಕಳುಹಿಸಿ ಕೊಡಬೇಕು ಎಂದು ಮನವಿ ಮಾಡಿಕೊಂಡರು.