ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ 

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳೆ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೇಳ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವರಿ ಸಚಿವ ಕೆ.ಸಿ.ನಾರಾಯಣ ಗೌಡ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಆರೋಗ್ಯ ಮೇಳದಲ್ಲಿ ಹೃದಯ, ಸ್ತ್ರೀ, ಮಕ್ಕಳು ಸೇರಿದಂತೆ ಹಲವು ವಿಭಾಗದ ತಜ್ಞ ವೈದ್ಯರು ಭಾಗಿಯಾಗಿದ್ದಾರೆ. ಅವರಿಂದ ಉಚಿತವಾಗಿ ಆರೋಗ್ಯ ಸೇವೆ ಪಡೆಯಬಹುದಾಗಿದೆ. ಇದರ ಜೊತೆಗೆ, ಉಚಿತ ಪ್ರಯೋಗಾಲಯ ಪರೀಕ್ಷೆ, ಔಷಧಿ ವಿತರಣೆ , ಆಯೂಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ, ನೇತ್ರದಾನ ನೋಂದಣಿ ಕುರಿತು ಮಾಹಿತಿ ಸೇರಿದಂತೆ ಹಲವು ಸೇವೆಗಳನ್ನು ಕೂಡ ನೀಡಲಾಗಿದೆ.